ಪೊಳಲಿ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಗೆ ಬಂಟ್ವಾಳ ತಾಲೂಕು ಕಚೇರಿ ವತಿಯಿಂದ ಹಮ್ಮಿಕೊಂಡ 2ನೇ ವರ್ಷದ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ .ಎಸ್.ಆರ್ ಅವರು ಚಾಲನೆ ನೀಡಿದರು.
ಎ.23ರಂದು ಶನಿವಾರ ಬೆಳಗ್ಗೆ 5.00 ಗಂಟೆಗೆ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗದ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಿಂದ ಪೊಳಲಿ ಶ್ರೀ ಕ್ಷೇತ್ರಕ್ಕೆ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಉತ್ಸಾಹದಿಂದ ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡು ಶ್ರೀ ರಾಜರಾಜೇಶ್ವರಿ ಅಮ್ಮನವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಉಪತಹಸೀಲ್ದಾರ್ ನವೀನ್ ಬೆಂಜನಪದವು, ದಿವಾಕರ ಮುಗುಳಿಯ. ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ಮಾಹಿಳಾ ಅಧಿಕಾರಿಗಳು ಸಹಿತ ಕಚೇರಿಯ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು.

