ಕೈಕಂಬ: ಒಡ್ಡೂರು ಫಾರ್ಮ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ನೇತೃತ್ವದಲ್ಲಿ ಏ.28ರಂದು ಕಮಲೋತ್ಸವ ನಡೆಯಲಿರುವ ಕಾರ್ಯಕ್ರಮದಲ್ಲಿ 15ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ ಎಂದು ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.
ನಗರದಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನನ್ ಕುಮಾರ್ ಕಟೀಲು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಅಂಗಾರ, ಬಿಜೆಪಿ ಜಿಲ್ಲಾಧ್ಯಕ್ಷ ಎಂ. ಸುದರ್ಶನ ಹಾಗೂ ಜಿಲ್ಲೆಯ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ಸಮಾರೋಪ ಹಾಗೂ ಬಹುಮಾನ ವಿತರಣೆ ನಡೆಯಲಿದೆ ಎಂದರು.
ಪಕ್ಷದ ತೀರ್ಮಾನಕ್ಕೆ ಶಾಸಕರು ಬದ್ಧ: ಬಂಟ್ವಾಳ ರಾಜೇಶ್ ನಾಯ್ಕ್ ಅವರು ಶಾಸಕರಾಗಿ ಆಯ್ಕೆಯಾದ ಬಳಕ ಟ್ವಾಳ ಕ್ಷೇತ್ರದಲ್ಲಿ ಮಾದರಿಯಾಗಿ ಕೆಲಸ ಮಾಡಿ ತೋರಿಸಿದ್ದಾರೆ. ಅವರು ಈವರೆಗೆ ಯಾವುದೇ ಸಂದರ್ಭ ಚುನಾವಣೆಯಿಂದ ಸರಿಯುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಹಾಗೊಂಡು ಗಾಳಿಸುದ್ದಿ ಹರಿದಾಡುತ್ತಿದೆ ಅಷ್ಟೇ. ಆದರೆ ಈ ವಿಚಾರದಲ್ಲಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜೇಶ್ ನಾಯ್ಕ ಅವರು ಬದ್ದರಾಗಿದ್ದಾರೆ. ಈ ಹಿಂದಿನ ಚುನಾವಣೆಯಲ್ಲೂ ರಾಜೇಶ್ ನಾಯ್ಕ್ ಅವರು ಚುನಾವಣೆಗೆ ನಿಲ್ಲಲು ಅಪೇಕ್ಷಿತರಾಗಿರಲಿಲ್ಲ. ಆದರೆ ಬಿಜೆಪಿ ಪಕ್ಷದ ಸೂಚನೆ ಮೇರೆಗೆ ಚುನಾವಣೆಗೆ ನಿಂತಿದ್ದಾರೆ. ಈ ಬಾರಿಯೂ ಅಷ್ಟೆ, ಪಕ್ಷದ ನಿರ್ಧಾ ರಕ್ಕೆ ಬದ್ಧರಾಗಿರಲಿದೆ ಎಂದು ದೇವದಾಸ್ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಂಟ್ವಾಳ ಮಂಡಲದ ರೊನಾಲ್ಡ್ ಡಿಸೋಜಾ, ಮಾಧ್ಯಮ ಪ್ರಮುಖ್ ಯಶೋಧರ ರಂಜಿತ್ ಮೈರಾ, ನರಿಕೊಂಬು ಮಂಡಲದ ಡೊಂಬಯ್ಯ ಉಪಸ್ಥಿತರಿದ್ದರು.
