ಬಂಟ್ವಾಳ: ತಾಲ್ಲೂಕಿನ ದಡ್ಡಲಕಾಡು ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ.೭ ಮತ್ತು ೮ ರಂದು ನಡೆಯಲಿರುವ ಶಾಲೆಯ ನೂತನ ಕೊಠಡಿ ಮತ್ತು ಕಲಿಕಾ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎ.27ರಂದು ಬುಧವಾರ ಆಹ್ವಾನಿಸಲಾಯಿತು.
ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್, ಸಚಿವ ಎಸ್. ಅಂಗಾರ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ ಇದ್ದರು.
