ಬಂಟ್ವಾಳ: ಎಐಟಿಯುಸಿ ವತಿಯಿಂದ ಭಾನುವಾರ ನಡೆದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್ ಮಾತನಾಡಿದರು.
ಕಾರ್ಮಿಕರ ಪರ ಯೋಜನೆ ರೂಪಿಸಬೇಕಾದ ಸರ್ಕಾರವು ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿ ಮೂಲಕ ಕಾರ್ಮಿಕರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಕೊರೋನಾ ನೆಪದಲ್ಲಿ ಕೇಂದ್ರ ಸರ್ಕಾರವು ಅವೈಜ್ಞಾನಿಕ ಲಾಕ್ ಡೌನ್ ನಡೆಸುವ ಮೂಲಕ ಜನರ ದಾರಿದ್ರ್ಯ ನಿವಾರಿಸುವ ಬದಲಾಗಿ ಜನತೆಗೆ ದರಿದ್ರ ಸರ್ಕಾರವಾಗಿ ಕಾಡುತ್ತಿದೆ ಎಂದು ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್ ಆರೋಪಿಸಿದ್ದಾರೆ.
ಬಂಟ್ವಾಳದಲ್ಲಿ ಎಐಟಿಯುಸಿ ವತಿಯಿಂದ ಭಾನುವಾರ ನಡೆದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲ್ಲೂಕು ಮುಖಂಡ ಬಾಬು ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಭಾರತೀಯ ಮಹಿಳಾ ಒಕ್ಕೂಟ ರಾಜ್ಯ ಕಾರ್ಯದರ್ಶಿ ಭಾರತಿ ಪ್ರಶಾಂತ್, ಅಖಿಲ ಭಾರತ ಯುವಜನ ಫೆಡರೇಶನ್ ಪ್ರೇಮನಾಥ ಕೆ. ಮಾತನಾಡಿದರು. ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಪ್ರಾಸ್ತಾವಿಕ ಮಾತನಾಡಿದರು. ಕೇಶವತಿ ಸ್ವಾಗತಿಸಿ, ಶಮಿತಾ ವಂದಿಸಿದರು.
