ಬಂಟ್ವಾಳ: ತಾಲ್ಲೂಕಿನ ಮಂಚಿ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಭಾನುವಾರ ಆರಂಭಗೊAಡ ಮೂರು ದಿನಗಳ ‘ಬಿ.ವಿ.ಕಾರಂತ ನಾಟಕೋತ್ಸವ’ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.2btl-Manchi

ರಂಗಕರ್ಮಿ ಬಿ.ವಿ.ಕಾರಂತ ಅವರ ಹೆಸರು ಚಿರಸ್ಥಾಯಿಗೊಳಿಸುವ ನಿಟ್ಟಿನಲ್ಲಿ ಅವರ ಹುಟ್ಟೂರಿನ ಕಲಾಸಕ್ತರು ನಿರ್ಮಿಸುವ ಸಾರ್ವಜನಿಕ ರಂಗಮಂದಿರಕ್ಕೆ ಸರ್ಕಾರದಿಂದ ನೆರವು ನೀಡುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.

ಮಂಚಿ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಭಾನುವಾರ ಆರಂಭಗೊಂಡ ಮೂರು ದಿನಗಳ ‘ಬಿ.ವಿ.ಕಾರಂತ ನಾಟಕೋತ್ಸವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಂಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ, ಸಾಧಕರ ಹೆಸರು ಶಾಶ್ವತಗೊಳಿಸುವ ಕಾರ್ಯಕ್ರಮ ಆಯೋಜನೆ ಅಗತ್ಯ ಎಂದರು.

ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಇದ್ದರು.
ಟ್ರಸ್ಟ್ ಉಪಾಧ್ಯಕ್ಷ ಗಣೇಶ್ ಐತಾಳ್ ಚೌಕದಪಾಲು ಸ್ವಾಗತಿಸಿ, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ವಂದಿಸಿದರು. ಸದಸ್ಯ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಆಯನ ನಾಟಕ ಮನೆ ತಂಡದಿAದ ‘ದ್ವೀಪ’ ನಾಟಕ ಪ್ರದರ್ಶನಗೊಂಡಿತು.

By Suddi9

Leave a Reply

Your email address will not be published. Required fields are marked *