ಪಾಟ್ನಾ: ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದ ಘಟನೆ ಗುರುಗ್ರಾಮದ ಡಿಎಲ್‍ಎಫ್ 3ನೇ ಹಂತದ ಪ್ರದೇಶವೊಂದರಲ್ಲಿ ಸೋಮವಾರ ನಡೆದಿದೆ.

STOP RAPE

ಗುರುಗ್ರಾಮದ ಡಿಎಲ್‍ಎಫ್ 3ನೇ ಹಂತದ ಪ್ರದೇಶದ ನಾಥುಪುರದಲ್ಲಿ 23 ವರ್ಷದ ಮಹಿಳೆಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಆರೋಪಿಯನ್ನು ಬಿಹಾರ ನಿವಾಸಿ ಅನಿಲ್ ಠಾಕೂರ್ ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಸಂತ್ರಸ್ತೆಯ ಪತಿ, ಆಟೋರಿಕ್ಷಾ ಚಾಲಕನಾಗಿದ್ದು, ಪೊಲೀಸ್ ದೂರಿನಲ್ಲಿ ತಮ್ಮ ಹೆಂಡತಿಯಿಂದ ಕರೆ ಬಂದಿತ್ತು. ಇಬ್ಬರು ಪುರುಷರು ನನ್ನ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಿದಳು. ನಾನು ಸ್ಥಳದ ಬಗ್ಗೆ ಅವಳನ್ನು ಕೇಳಿದಾಗ, ಅವಳು ಅದನ್ನು ಬಹಿರಂಗಪಡಿಸಲು ಸಾಧ್ಯವಾಗಲಿಲ್ಲ. ಆದರೆ ಹೇಗಾದರೂ ಅವಳು ಮನೆಗೆ ತಲುಪಿದಳು ಎಂದು ತಿಳಿಸಿದ್ದಾರೆ.

ಮಹಿಳೆಯ ಹೇಳಿಕೆಯನ್ನು ಇನ್ನೂ ದಾಖಲಿಸಿಕೊಳ್ಳಬೇಕಾಗಿದೆ. ಈಗಾಗಲೇ ಪತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಪತಿಯ ದೂರಿನ ಆಧಾರದ ಮೇಲೆ ಇಬ್ಬರ ವಿರುದ್ಧವು ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

By Suddi9

Leave a Reply

Your email address will not be published. Required fields are marked *