ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸಮೀಪದ ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೆಮಿನಾರ್ ಸಭಾಂಗಣ ಕಟ್ಟಡಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರು ಶುಕ್ರವಾರ ಬೆಳಿಗ್ಗೆ ೧೦.೩೦ಗಂಟೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಾಲೆಜಿನ ಪ್ರಾಂಶುಪಾಲ ಡಾ.ಸತೀಶ ಗಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಕಾಲೇಜು ಅಭಿವರದ್ಧಿ ಸಮಿತಿ ಕಾರ್ಯಾಧ್ಯಕ್ಷ ವಕೀಲ ಪ್ರಸಾದ್ ಕುಮಾರ್ ರೈ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
