ರಾಯಿ: ೧೦ರಿಂದ ಎನ್ ಎಸ್ ಎಸ್ ವಿಶೇಷ ಶಿಬಿರ
ಬಂಟ್ವಾಳ: ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಇದೇ ೧೦ರಿಂದ ೧೬ರತನಕ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶಿಬಿರಕ್ಕೆ ಚಾಲನೆ ನೀಡಲಿದ್ದು, ಹಿಂದೂ ಧರ್ಮೋತ್ಥಾನ ವೇದಿಕೆ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು ಶ್ರಮದಾನ ಉದ್ಘಾಟಿಸುವರು.
ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಸೂರ್ಯನಾರಾಯಣ ಭಟ್ ಕಶೆಕೋಡಿ ಸಮಾರೋಪ ಭಾಷಣ ಮಾಡುವರು. ಶ್ರೀರಾಮ ವಿದ್ಯಾ ಕೇಂದ್ರ ಸಂಚಾಲಕ ವಸಂತ ಮಾಧವ, ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾ ಆನಂದ, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಮತ್ತಿತರ ಸ್ಥಳೀಯ ಗಣ್ಯರು ಭಾಗವಹಿಸುವರು ಎಂದು ಮುಖ್ಯ ಶಿಕ್ಷಕ ಜಯರಾಮ ಪಡ್ರೆ ತಿಳಿಸಿದ್ದಾರೆ.