ನವದೆಹಲಿ: ಜನ ಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆ 1,000ರೂ. ದಾಟಿದೆ. ಅಲ್ಲದೇ ವಾಣಿಜ್ಯ ಎಲ್‍ಪಿಜಿ ಗ್ಯಾಸ್ ದರ ಕೂಡ ಏರಿಕೆಯಾಗಿದೆ.

ಗುರುವಾರದಿಂದ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 3 ರೂಪಾಯಿ 50 ಪೈಸೆ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ 8 ರೂಪಾಯಿಯಷ್ಟಾಗಿದೆ. ಇಂದಿನಿಂದ ದೆಹಲಿ ಮತ್ತು ಮುಂಬೈಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ನ ಬೆಲೆ 1,003 ರೂ. ಆಗಿದ್ದು, ಕೋಲ್ಕತ್ತಾದಲ್ಲಿ 1,029 ರೂ. ಮತ್ತು ಚೆನ್ನೈನಲ್ಲಿ 1,018.5 ರೂ. ಆಗಿದೆ.

