ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಬಸ್ತಿಪಡ್ಪು ಬಳಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಮನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗುರುವಾರ ಭೇಟಿ ನೀಡಿದರು. ಶಾಸಕ ಯು.ಟಿ.ಖಾದರ್ ಮತ್ತಿತರರು ಇದ್ದಾರೆ.

ರಾಜ್ಯದಲ್ಲಿ ೧೦ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣಗುರುವಿನ ಬಗ್ಗೆ ಪಾಠ ಕೈಬಿಟ್ಟಿರುವ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಇದರಿಂದಾಗಿ ಕರಾವಳಿ ಬಿಲ್ಲವರು ಸೇರಿದಂತೆ ರಾಜ್ಯದ ಅಪಾರ ಮಂದಿ ಅನುಯಾಯಿಗಳ ಭಾವನೆಗೆ ನೋವು ಉಂಟಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ಸಮೀಪದ ಬಸ್ತಿಪಡ್ಪು ಬಳಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಮನೆಗೆ ಗುರುವಾರ ಭೇಟಿ ನೀಡಿ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ‘ಪ್ರಜಾವಾಣಿ’ ಪ್ರಕಟಿಸಿದ ವಿಶೇಷ ವರದಿ ಮತ್ತು ಲೇಖನ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ವಿರೋಧ ಪಕ್ಷ ಉಪನಾಯಕ ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾರ್ಪೊರೇಟರ್ ನವೀನ್ ಡಿಸೋಜ, ಪ್ರಮುಖರಾದ ಪಿ.ವಿ.ಮೋಹನ್, ಸದಾಶಿವ ಉಳ್ಳಾಲ್, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *