ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗೂಡಿನಬಳಿ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.21ರಂದು ಶನಿವಾರ ನಡೆದಿದೆ. ಮೃತರನ್ನು ಬಂಟ್ವಾಳ ಪೇಟೆ ನಿವಾಸಿ ಸವಿತಾ ಭಟ್ (೫೮) ಎಂದು ಗುರುತಿಸಲಾಗಿದ್ದು, ಸ್ಥಳೀಯ ಮುಸ್ಲಿಂ ಯುವಕರು ಮೃತ ಶರೀರ ಮೇಲೆತ್ತಿರುವುದಾಗಿ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.