ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಬೆಲೆ ಏರಿಕೆ ಮತ್ತು ಪಠ್ಯ ಪುಸ್ತಕ ಪರಿಷ್ಕರಣೆ ಮೂಲಕ ಜನರ ಭಾವನೆಗಳ ವಿರುದ್ಧ ಚೆಲ್ಲಾಟವಾಡುತ್ತಿದೆ ಎಂದು ಸಮಾನ ಮನಸ್ಕ ಸಂಘಟನೆಗಳ ಅಧ್ಯಕ್ಷ ಪ್ರಕಾಶ್ ಬಿ. ಶೆಟ್ಟಿ ತುಂಬೆ ಆರೋಪಿಸಿದ್ದಾರೆ.
ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಮೇ.24ರಂದು ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಇದೇ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ಘೊಷಣೆ ಕೂಗಿದರು.
ಸಂಘದ ಗೌರವಾಧ್ಯಕ್ಷ ಬಿ.ಎಂ.ಪ್ರಭಾಕರ ದೈವಗುಡ್ಡೆ, ಪ್ರಮುಖರಾದ ಸುರೇಶ್ ಕುಮಾರ್ ಬಂಟ್ವಾಳ್, ಬಿ.ಶೇಖರ್, ರಾಮಣ್ಣ ವಿಟ್ಲ, ಬಿ.ಎಂ.ಅಬ್ಬಾಸ್ ಆಲಿ, ಉದಯ ಕುಮಾರ್, ಶಿವರಾಮ ಶೆಟ್ಟಿ, ಮೋಹನ ಅರಳ, ಕೇಶವ ನಾಯ್ಕ್ ಮತ್ತಿತರರು ಇದ್ದರು.
