ಮುಂಬಯಿ : ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಅವರ ನಿಧನದ ಬಗ್ಯೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಮಂಗಳವಾರ ಮೌನ ಪ್ರಾರ್ಥನೆ, ಪುಷ್ಪಾರ್ಚನೆ ಬಳಿಕ ನುಡಿನಮನ ಸಲ್ಲಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.14

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.11

ಶಾಂತಿವನ ಟ್ರಸ್ಟ್ ನ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ ಮತ್ತು ತೋಟಗಾರಿಕಾ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಮಾತನಾಡಿ ಯಶೋವರ್ಮ ಅವರ ಸರಳ ವ್ಯಕ್ತಿತ್ವ, ದಕ್ಷ ಆಡಳಿತ ಕ್ರಮದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.

ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣರಾವ್, ಪ್ರಧಾನ ಅರ್ಚಕರಾದ ಈಶ್ವರ ಪರ್ಲತ್ತಾಯ, ಅನ್ನಪೂರ್ಣಛತ್ರದ ಸುಬ್ರಹ್ಮಣ್ಯ ಪ್ರಸಾದ್, ಶುಭಚಂದ್ರರಾಜ ಮತ್ತು ಎಲ್ಲಾ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *