ಬಂಟ್ವಾಳ: ದಿಲ್ಲಿನ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ನಿವಾಸಿ, ತರಕಾರಿ ವ್ಯಾಪಾರಿ ಪಿ.ಬಿ.ಹಾಮದ್ (೭೩) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಜೂ.02ರಂದು ಗುರುವಾರ ನಿಧನರಾದರು.
ಗುಡ್ಡೆ ಅಂಗಡಿ ನೂರುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ಸಹಕಾರಿ ವಿಭಾಗದ ಅಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ಬಂಗ್ಲೆಗುಡ್ಡೆ ಬೂತ್ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದರು. ಮೃತರಿಗೆ ಪತ್ನಿ, ಆರು ಮಂದಿ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮಾಜಿ ಸಚಿವ ಬಿ ರಮಾನಾಥ ರೈ ಮತ್ತಿತರರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
