ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗೂಡಿನಬಳಿ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ವೃದ್ಧ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.02ರಂದು ಗುರುವಾರ ನಡೆದಿದೆ.
ಮೃತರು ನರಿಕೊಂಬು ಗ್ರಾಮದ ನಾಟಿ ನಿವಾಸಿ ಮೋನಪ್ಪ ಪೂಜಾರಿ (೬೪) ಎಂದು ಗುರುತಿಸಲಾಗಿದೆ. ಇದೇ ವೇಳೆ ಸ್ಥಳೀಯ ಈಜುಗಾರರು ಅವರನ್ನು ಮೇಲೆತ್ತಿದ್ದು, ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಗೂಡಂಗಡಿ ವ್ಯಾಪಾರ ನಡೆಸುತ್ತಿದ್ದ ಇವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.
