ವಿಟ್ಲ: ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಕೊಡಂಗಾಯಿ ಇದರ ವತಿಯಿಂದ ವಿಟ್ಲ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಾಗರಾಜ್ ಹೆಚ್ ಇ ಇವರ ಕೋರಿಕೆಯ ಮೇರೆಗೆ, ಸಂಘದ ಸಾರ್ವಜನಿಕ ಉಪಕಾರ ನಿಧಿಯಿಂದ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ವೃತ್ತನಿರೀಕ್ಷಕ ನಾಗರಾಜ್ ಹೆಚ್ ಇರವರಿಗೆ ಕಂಪ್ಯೂಟರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ರೈ ಮೂರ್ಜೆಬೆಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಶ ರೈ ಎರ್ಮೆನಿಲೆ, ನಿರ್ಧೇಶಕರುಗಳಾದ ಸಂದೇಶ್ ಶೆಟ್ಟಿ ಬಿಕ್ನಾಜೆ ಮತ್ತು ನಾಗೇಶ್ ಶೆಟ್ಟಿ ಹಾಗೂ ಪೊಲೀಸ್ ಸಿಬಂಧಿಯವರು ಉಪಸ್ಥಿತರಿದ್ದರು.
