Published On: Sat, Jun 4th, 2022

ಲವ್ ಜಿಹಾದ್ ಆರೋಪ – ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು: ಇತಿಹಾಸ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಹಿಂದೂಯೇತರರ ಆಟೋ, ಟ್ಯಾಕ್ಸಿ ಮತ್ತು ವಾಹನ ಪ್ರವೇಶಿಸದಂತೆ ನಿರ್ಬಂಧ ವಿಧಿಸಿರುವ ನಾಮಫಲಕ ಅಳವಡಿಸಿರುವುದು ಕಂಡುಬಂದಿದೆ.

ಹಿಂದುಗಳ ಶ್ರದ್ಧಾ ಕೇಂದ್ರವಾದ ಸೌತಡ್ಕದಲ್ಲಿ ಅನ್ಯ ಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದುಯೇತರರ, ಆಟೋ, ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ದೇವಸ್ಥಾನದ ಪ್ರವೇಶ ದ್ವಾರದ ಬಳಿಯೇ ವಿಶ್ವ ಹಿಂದೂಪರಿಷತ್ ಬಜರಂಗದಳದ ಹೆಸರಿನಲ್ಲಿ ನಾಮಫಲಕ ಅಳವಡಿಸಲಾಗಿದೆ.

ಕೆಲ ದಿನಗಳ ಹಿಂದೆ ಇಲ್ಲಿನ ಮುಸ್ಲಿಂ ಆಟೋ ಚಾಲಕ ಲವ್ ಜಿಹಾದ್ ಎಸಗಿದ ಆರೋಪ ಕೇಳಿ ಬಂದಿತ್ತು. ಆ ಬಳಿಕ ಇದೀಗ ಅನ್ಯ ಕೋಮಿನವರ ವಾಹನ ಪ್ರವೇಶಕ್ಕೆ ನಿರ್ಬಂಧ ಹೇರಿರುವ ನಾಮಫಲಕ ಕಂಡು ಬಂದಿದೆ. ಸೌತಡ್ಕ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದು, ದೇವಸ್ಥಾನದ ವತಿಯಿಂದ ಯಾವುದೇ ನಿರ್ಬಂಧ ಫಲಕ ಹಾಕಿಲ್ಲ ಎಂಬ ಸ್ಪಷ್ಟನೆ ಆಡಳಿತ ಮಂಡಳಿ ನೀಡಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter