ಬಂಟ್ವಾಳ: ಕಳೆದ ಐದು ತಿಂಗಳ ಹಿಂದೆ ಆಡಳಿತಕ್ಕೆ ಬಂದ ಮೋದಿ ನೇತೃತ್ವದ ಸರಕಾರ ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತನ್ನು ಉಳಿಸುವ ಮೂಲಕ ಸಮೃದ್ಧ ಬಾರತ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದೆ. ಹಿಂದಿನ ಕೇಂದ್ರ ಸರಕಾರ ನಿರಂತರ ಜನೋಪಯೋಗಿ ವಸ್ತುಗಳ ಬೆಲೆಯನ್ನು ಏರಿಸಿದ್ದರೆ ಮೋದಿ ಸರಕಾರ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸುವ ಮೂಲಕ ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದೆ. ಜನ್-ಧನ್ನಂತಹ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಸ್ವಾವಲಂಬನೆಯ ಬದುಕು ಕಲ್ಪಿಸಿದೆ. ಆದರೆ ಮೋದಿ ಏನು ಮಾಡಿದ್ದಾರೆಂದು ಪ್ರಶ್ನಿಸುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ.ಆನಂದ ಹೇಳಿದ್ದಾರೆ.
ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕನರ್ಾಟಕದಲ್ಲಿ ಆಡಳಿತ ನಡೆಸುವ ಕಾಂಗ್ರೇಸ್ ಸರಕಾರ ಕೆಎಸ್ಆರ್ಟಿಸಿ ಬಸ್ಸು ದರವನ್ನು ಮುಂದಿನ ಒಂದು ವಾರದೊಳಗೆ ಕಡಿಮೆಗೊಳಿಸದೇ ಇದ್ದಲ್ಲಿ ಬಂಟ್ವಾಳ ವಿದಾನ ಸಭಾ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗೊಳಿಸಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರದ ಬಿಜೆಪಿ ಸರಕಾರ ಡಿಸೇಲ್ ಹಾಗೂ ಪಟ್ರೋಲು ದರವನ್ನು ಕಡಿಮೆ ಮಾಡಿದ್ದರೂ ರಾಜ್ಯ ಸರಕಾರ ಬಸ್ಸು ಪ್ರಯಾಣ ದರವನ್ನು ಕಡಿಮೆಗೊಳಿಸದೇ ಪ್ರಯಾಣಿಕರಿಗೆ ಅನ್ಯಾಯವೆಸಗುತ್ತಿದೆ. ಇದರ ವಿರುದ್ದ ಹೋರಾಟ ಅನಿವಾರ್ಯ ಎಂದರು.
ರಾಜ್ಯ ಸರಕಾರ ಕೇವಲ ಘೋಷಣೆಯಲ್ಲೇ ಕಾಲ ಕಳೆಯುತ್ತಿದೆ ವಿನಹಃ ರಾಜ್ಯದ ಜನತೆಯ ಹಿತದೃಷ್ಠಿಯಿಂದ ಯಾವುದೇ ಯೋಜನೆ ರೂಪಿಸಿಲ್ಲ. ಒಂದು ರೂಪಾಯಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿರುವ ರಾಜ್ಯ ಸರಕಾರ ಕಳೆದ ಒಂದು ತಿಂಗಳಿನಿಂದ ಪಡಿತರ ಚೀಟಿಯನ್ನೇ ರದ್ದು ಪಡಿಸಿ ರಾಜ್ಯದ ಹಲವಾರು ಬಡಕುಟುಂಬಗಳಿಗೆ ಪಡಿತರ ಸಾಮಾಗ್ರಿ ನೀಡದೇ ವಂಚನೆ ಮಾಡಿದೆ. ಮುಂದಿನ ಒಂದು ತಿಂಗಳೊಳಗೆ ಪಡಿತರ ವ್ಯವಸ್ಥೆಯನ್ನು ಸರಿ ಪಡಿಸದೇ ಇದ್ದಲ್ಲಿ ಬಿಜೆಪಿ ವತಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಆನಂದ ಹೇಳಿದರು.
ಬಿಜೆಪಿ ಪ್ರಧಾನ ಕಾರ್ಯದಶರ್ಿಗಳಾದ ರಾಮದಾಸ್ ಬಂಟ್ವಾಳ್, ದೇವಪ್ಪ ಪೂಜಾರಿ, ರತ್ನಕುಮಾರ್ ಚೌಟ, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಮಾಜಿ ಅಧ್ಯಕ್ಷ ದಿನೇಶ್ ಭಂಡಾರಿ ಸುದ್ದಿಗೋಷ್ಠಿಯಲ್ಲಿದ್ದರು.
