ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸತ್ತು ಮತ್ತು ವಿವಿಧ ಕ್ಲಬ್ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು.4BTL-SIDDAKATTE

ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ನಡೆದ ಸಂಸತ್ತು ಮತ್ತು ವಿವಿಧ ಕ್ಲಬ್ ಉದ್ಘಾಟನೆ ಕಾರ್ಯಕ್ರಮಕ್ಕೆ ಉಪನ್ಯಾಸಕ ಪ್ರೊ.ಶೀನಪ್ಪ ಚಾಲನೆ ನೀಡಿದರು. ಶಾಲಾ ಸಂಚಾಲಕ ಧರ್ಮಗುರು ಡೇನಿಯಲ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಶಿಕ್ಷಕಿ ಭಗಿನಿ ಲೀಡಾ ಸ್ಯಾಂತಿಸ್ ಸಂಸತ್ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಶಾಲಾ ನಾಯಕಿ ಅನನ್ಯ ಪ್ರಭು ಸಹಿತ ಸಂಸತ್ ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕರಿಸಿದರು.

ಆಡಳಿತ ಮಂಡಳಿ ಸದಸ್ಯ ವಲೇರಿಯನ್ ಲೋಬೋ ಮತ್ತಿತರರು ಇದ್ದರು. ವಿದ್ಯಾರ್ಥಿನಿ ಶಿಯಾ ಡಿಸೋಜ ಸ್ವಾಗತಿಸಿ, ರಿಯಾ ಡೇಸಾ ವಂದಿಸಿದರು.

By suddi9

Leave a Reply

Your email address will not be published. Required fields are marked *