ಮಾಣಿ: ಕಾಂಗ್ರೆಸ್ ಸಮಾಲೋಚನಾ ಸಭೆ
ಬಂಟ್ವಾಳ: ತಾಲ್ಲೂಕಿನ ಮಾಣಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ನಡೆದ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತುಕತೆ ನಡೆಸಿದರು.
ಮಾಣಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜೂ.07ರಂದು ಮಂಗಳವಾರ ನಡೆದ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧಕ್ಷತೆ ವಹಿಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಸಂಘಟನೆ ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಜಲ್ಲಾ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಕಾರ್ಯದರ್ಶಿ ನಿರಂಜನ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಹಾಜಿ ಆದಂ ಕುಂಞಿ, ಕುಶಲ ಎಂ.ಪೆರಾಜೆ, ಬಾಲಕೃಷ್ಣ ಆಳ್ವ, ಸಿದ್ದಿಕ್ ಸರವು ಮತ್ತಿತರರು ಇದ್ದರು.