Published On: Wed, Jun 8th, 2022

ಮಂಗಳೂರು: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ-ಆರೋಪಿ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಜೂ.06ರಂದು ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.Capture

ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ. ಯುವತಿ ಜೂ.06ರಂದು ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ. ಈ ಕುರಿತು ಯುವತಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಸ್ತಾಫಾ ಬೆಂಗಳೂರಿನಲ್ಲಿ ಚಪ್ಪಲಿ ಅಂಗಡಿ ಹೊಂದಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಶಶಿಕುಮಾರ್ ಇಂತಹ ಕಿರುಕುಳಕ್ಕೊಳಗಾದರೆ ಮಹಿಳೆಯರು ಧೈರ್ಯದಿಂದ ದೂರು ನೀಡಿ ಎಂದಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter