ಪುಂಜಾಲಕಟ್ಟೆ 29 ಕೋ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀನಾರಾಯಣ ಗುರು ವಸತಿ ಶಾಲೆಯ ಜಾಗಕ್ಕೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಭೇಟಿ
ಪುಂಜಾಲಕಟ್ಟೆ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆಯಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಯ ಜಾಗವನ್ನು ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಪುಂಜಾಲಕಟ್ಟೆ ಖಾಸಗಿ ಕಟ್ಟಡದ ಲ್ಲಿ ತಾತ್ಕಾಲಿಕವಾಗಿ ಈ ಶೈಕ್ಷಣಿಕ ವರ್ಷದಿಂದ ಆರಂಭವಾಗುವ ಬ್ರಹ್ಮಶ್ರೀ ನಾರಾಯಣ ಗುರುವಸತಿ ಶಾಲೆಗೆ ಸ್ವಂತ ಜಮೀನು ಗುರುತಿಸಿ, ಕಟ್ಟಡದ ನಿರ್ಮಾಣಕ್ಕೆ ಪೂರ್ವ ತಯಾರಿ ಗಳು ನಡೆಯುತ್ತಿದೆ.
ಆರಂಭಿಕ ಹಂತದಲ್ಲಿ ಜಮೀನಿನ ಗುರುತಿಸಿ , ಜಾಗವನ್ನು ನಾರಾಯಣ ಗುರು ವಸತಿ ಶಾಲೆಯ ಹೆಸರಿನಲ್ಲಿ ದಾಖಲಿಸಿಕೊಂಡು ಅ ಬಳಿಕ ಕಟ್ಟಡದ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ರಶ್ಮಿ ಎಸ್. ಆರ್. ಬಂಟ್ವಾಳ ತಹಶೀಲ್ದಾರ್ ಸ್ಮಿತಾರಾಮು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗ, ಐ.ಟಿ.ಡಿ.ಪಿ.ಪ್ರಾಜೆಕ್ಟ್ ಡೈರೆಕ್ಟರ್ ಗಾಯತ್ರಿ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ, ಸದಸ್ಯ ಕಾಂತಪ್ಪ ಪೂಜಾರಿ, ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣೀಕ ರಾಜು,ಗ್ರಾಮ ಸಹಾಯಕ ಸಂತೋಷ್,ಪಂಚಾಯತ್ ಕಾರ್ಯದರ್ಶಿ ಬಾಲಕೃಷ್ಣ, ಪ್ರಾಂಶುಪಾಲ ಸಂತೋಷ್, ಮತ್ತಿತರರು ಉಪಸ್ಥಿತರಿದ್ದರು.