ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ನಾಗವೇಣಿ ಮಿಜಾರು ಇವರನ್ನು ಸನ್ಮಾನಿಸಲಾಯಿತು.9btl-Manchakallu

ಸುಸಂಸ್ಕೃತ ಸಮಾಜ ನಿರ್ಮಾಣದ ಜೊತೆಗೆ ಜ್ಞಾನಸಂಪನ್ನ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಅರ್ಪಿಸುವ ಶಿಕ್ಷಕ ವೃತ್ತಿ ಶ್ರೇಷ್ಟವಾಗಿದೆ ಎಂದು ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಮೈಕೆಲ್ ಡಿಸೋಜ ಹೇಳಿದ್ದಾರೆ.

ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಅಮಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಗಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯ ಸಂದೇಶ ಶೆಟ್ಟಿ ಪೊಡುಂಬ ಮಾತನಾಡಿ, ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಈ ಗ್ರಾಮೀಣ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಲು ಶ್ರಮಿಸುವುದಾಗಿ ತಿಳಿಸಿದರು.

ಇದೇ ವೇಳೆ ನಿವೃತ್ತ ಶಿಕ್ಷಕಿ ನಾಗವೇಣಿ ಮಿಜಾರು ಇವರನ್ನು ಶಾಲಾಭಿವೃದ್ಧಿ ಸಮಿತಿ ಮತ್ತು ನಾಗರಿಕರ ವತಿಯಿಂದ ಸನ್ಮಾನ, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಗಳಿಸಿದ ಹಳೆ ವಿದ್ಯಾರ್ಥಿಳನ್ನು ಅಭಿನಂದಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ಶಕುಂತಳಾ, ಶಾಂತ, ಅಂಗನವಾಡಿ ಕಾರ್ಯಕರ್ತೆ ಹೇಮಾ, ಪ್ರಮುಖರಾದ ಜಿ.ಸುರೇಶ ಸಾಲ್ಯಾನ್, ಮೀನಾಕ್ಷಿ ಶೆಟ್ಟಿಗಾರ್, ಸುಲೋಚನಾ ಮತ್ತಿತರರು ಇದ್ದರು. ಮುಖ್ಯಶಿಕ್ಷಕಿ ವಿನಿತಾ ಅರ್ಕುಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಶಿಕ್ಷಕಿ ಭವಾನಿ ಮಹೇಶ್ ವಂದಿಸಿದರು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *