ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಿಗೆ ಮನವಿ
ಕಾರ್ಕಳ: ಯರ್ಲಪಾಡಿ ಗ್ರಾಮದ ಜಾರ್ಕಳ, ನೂಜಿಗುಡ್ಡೆ, ಬಾವದಕರೆ ಬ್ರಹ್ಮಮುಗೇರ ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಯರ್ಲಪಾಡಿ ಗ್ರಾಮಪಂಚಾಯತ್ ವತಿಯಿಂದ ವಿಶೇಷ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಯರ್ಲಪಾಡಿ,ಯರ್ಲಪಾಡಿ ಬಿಜೆಪಿ ಗ್ರಾಮಸಮಿತಿ ಪ್ರಧಾನ ಕಾರ್ಯದರ್ಶಿ ಮುಸ್ತಾಫ್ ಜಾರ್ಕಳ ಉಪಸ್ಥಿತರಿದ್ದರು.