ಬಿಜೆಪಿ ಮುಖಂಡ ನೂಪುರ್ ಶರ್ಮಾ ಮೊಹಮ್ಮದ್ ಪೈಂಗಬರ್ ಬಗ್ಗೆ ನೀಡಿದ ಹೇಳಿಕೆಯನ್ನು ಆಗ್ರಹಿಸಿ ದೇಶದೆಲ್ಲೆಡೆ ಪ್ರತಿಭಟನೆ
ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಂಗಬರ್ ಬಗ್ಗೆ ನೀಡಿದ ಹೇಳಿಕೆಯನ್ನು ಆಗ್ರಹಿಸಿ ದೇಶದೆಲ್ಲೆಡೆ ಮುಸ್ಲಿಂ ಸಮುದಾಯಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರದ ಎಚ್ಚೆತ್ತುಕೊಂಡು ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದ ಸುವ್ಯವಸ್ಥೆ ಹದಗೆಡುವ ಯಾವುದೇ ಭದ್ರತಾ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಮತ್ತು ಪೋಲಿಸ್ ಠಾಣೆಗಳಿಗೆ ಎಚ್ಚರಿಕೆ ನೀಡಲಾಗಿದೆ.
ಅಲ್ಲದೇ ಜೂ.20 ಮತ್ತು 21ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿರುವ ಕಾರಣ, ಎಲ್ಲೆಡೆ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದ ಕಾರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನಿನ್ನೆ ಸಭೆ ಕರೆದು ಚರ್ಚೆ ಮಾಡಿದ್ದಾರೆ. ರಾಜ್ಯದ ಶಾಂತಿಗೆ ಯಾವುದೇ ಭಂಗ ಬಾರದಂತೆ ನೋಡಿಕೊಳ್ಳಬೇಕು. ಇದರ ಜೊತೆಗೆ ಠಾಣಾ ಮಟ್ಟದಲ್ಲಿ ಶಾಂತಿ ಸಭೆ ನಡೆಸಿ, ಸಮುದಾಯದ ಮುಖಂಡರಿಗೆ ಮನವಿ ಮಾಡುವಂತೆ ಪೋಲಿಸರಿಗೆ ಮುಖ್ಯಮಂತ್ರಿ ತಿಳಿಸಿದ್ದಾರೆ.