ಬಂಟ್ವಾಳ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಇವರನ್ನು ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವತಿಯಿಂದ ಪುತ್ತೂರು ಮಾಧುರಿ ಸಭಾಂಗಣದಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಉಪಾಧ್ಯಕ್ಷ ರಾಜಾರಾಮ ಶೆಟ್ಟಿ, ವ್ಯವಸ್ಥಾಪನಾ ನಿರ್ದೇಶಕ ತಿಮ್ಮಯ್ಯ ಪಿ. ಮತ್ತಿತರರು ಇದ್ದರು. 
