ಭೋಪಾಲ್: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಶುಕ್ರವಾರ ತಡ ರಾತ್ರಿ ಜೀವ ಬೆದರಿಕೆ ಕರೆ ಬಂದಿದೆ. ವ್ಯಾಟ್ಸಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೆದರಿಕೆ ಕರೆ ಹಿನ್ನೆಲೆ ಸಾಧ್ವಿ ಪ್ರಜ್ಞಾ ಠಾಕೂರ್ ನಗರದ ಟಿಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍ನ ಕಡೆಯ ವ್ಯಕ್ತಿ ಎಂದು ಹೇಳಿಕೊಂಡಿರುವ ವ್ಯಕ್ತಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂಭಾಷಣೆಯಲ್ಲಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಹತ್ಯೆ ಮಾಡುವುದಾಗಿ ಅಪರಿಚಿತ ವ್ಯಕ್ತಿ ಹೇಳಿದ್ದಾನೆ.

ಇತ್ತೀಚೆಗೆ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಹೇಳಿಕೆಯನ್ನು ಸಾಧ್ವಿ ಬೆಂಬಲಿಸಿದ್ದರು. ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಭಾರತ ಹಿಂದೂಗಳದ್ದು, ಸಿನಿಮಾ ಮಾಡುವ ಮೂಲಕ ಹಿಂದೂ ದೇವತೆಗಳ ಮೇಲೆ ಕೆಲವು ಧರ್ಮದ್ರೋಹಿಗಳು ದೌರ್ಜನ್ಯ ಎಸಗುತ್ತಿದ್ದಾರೆ. ಭಾರತದಲ್ಲಿ ಕೇವಲ ಸನಾತನ ಸಂಸ್ಕೃತಿ ಇರಬೇಕು ಎಂದು ಹೇಳಿಕೆ ನೀಡಿದ್ದರು.

By suddi9

Leave a Reply

Your email address will not be published. Required fields are marked *