Published On: Sat, Jun 18th, 2022

ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉತ್ತರ ಮತ್ತು ದಕ್ಷಿಣ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಹೊಸ ಸೇನಾ ನೇಮಕಾತಿಯ ನೀತಿಯನ್ನು ಯುವಕರು ತಿರಸ್ಕರಿಸುತ್ತಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆ ಹೇಳಿದ್ದೆ. ಈಗಲೂ ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು. ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter