ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ
ಹೆಲ್ಸಿಂಕಿ: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಕ್ರೀಡಾತಾರೆ ನೀರಜ್ ಚೋಪ್ರಾ ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಗೇಮ್ಸ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಂದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ 86.69 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಫಿನ್‌ಲ್ಯಾಂಡ್‌ನಲ್ಲಿ ಈ ವಾರದ ಆರಂಭದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ನೀರಜ್ ಚೋಪ್ರಾ 89.30 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದರು, ಈ ಮೂಲಕ ತಮ್ಮದೇ ದಾಖಲೆ ಮುರಿದಿದ್ದರು.
ನೀರಜ್ ಚೋಪ್ರಾ ಟ್ರಿನಿಡಾಡ್ ಮತ್ತು ಟೊಬಾಗೋದ ಕೆಶೋರ್ನ್ ವಾಲ್ಕಾಟ್ ಮತ್ತು ಗ್ರೆನಡಾದ ವಿಶ್ವ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್‌ಗಿಂತ ಮೊದಲು ಗುರಿ ತಲುಪಿದರು.