ಅಂಬೇಡ್ಕರ್ ನಗರದಲ್ಲಿ ಶಾಸಕ ಡಾ. ಭರತ್ ಶೆಟ್ಟಿ 1ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ
ಕೈಕಂಬ : ಮಂಗಳೂರು ನಗರ ಪಾಲಿಕೆಯ ವಾಮಂಜೂರು ತಿರುವೈಲು ವಾರ್ಡ್ ೨೦ರ ಅಂಬೇಡ್ಕರ್ ನಗರದಲ್ಲಿ ಜೂ. ೧೯ರಂದು ಭಾನುವಾರ ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಒಂದು ಕೋಟಿ ರೂ(೧೦೦ ಲಕ್ಷ ರೂ) ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ಕಾರ್ಯಕರ್ತರನ್ನುದ್ದೇಶಿಸಿ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಈ ಭಾಗದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಇಲ್ಲಿ ಈಗಾಗಲೇ ಕೆಲವು ಸಣ್ಣಪುಟ್ಟ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದರೆ, ಈ ಬಾರಿ ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆಗಳು, ಚರಂಡಿ, ಫುಟ್ಪಾತ್, ಬೀದಿದೀಪಗಳ ವ್ಯವಸ್ಥೆ ಆಗಲಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿ ನಡೆಸಲು ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸುವೆ ಎಂದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹೇಮಲತಾ ಆರ್ ಸಾಲ್ಯಾನ್, ಬಿಜೆಪಿ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ್, ಉದ್ಯಮಿ ರಘು ಸಾಲ್ಯಾನ್, ಅನಿಲ್ ರೈ, ಉಮೇಶ್ ಕೋಟ್ಯಾನ್, ಓಂಪ್ರಕಾಶ್ ಶೆಟ್ಟಿ, ಲಕ್ಷö್ಮಣ್ ಶೆಟ್ಟಿಗಾರ, ಪಕ್ಷ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.