ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ರಾಧಾಕೃಷ್ಣ ಭಟ್ ಸರ್ವರನ್ನು ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಜಯಂತ್ ಆಚಾರ್ಯ ಆಸನಗಳ ಪ್ರಾತ್ಯಕ್ಷತೆ ನೀಡಿದರು. ಅರ್ಥಪೂರ್ಣವಾಗಿ ಎಲ್ಲಾ ವಿದ್ಯಾರ್ಥಿಗಳು ಯೋಗ ದಿನಾಚರಣೆಯ ಶುಭವ ಸರದಲ್ಲಿ ಪಾಲ್ಗೊಂಡರು. ಶ್ರೀಮತಿ ಉಮಾ ಕಾರ್ಯಕ್ರಮ ನಿರೂಪಿಸಿದರು. ಜಾನೆಟ್ ಲೋಬೊ ಧನ್ಯವಾದ ಸಮರ್ಪಿಸಿದರು.

