ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಶೆಟ್ಟಿಬೆಟ್ಟು:ವಿಶ್ವ ಯೋಗ ದಿನದ ಆಚರಣೆ
ಉಡುಪಿ: ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಶೆಟ್ಟಿಬೆಟ್ಟು,ಪರ್ಕಳ ಇಲ್ಲಿ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಯೋಗ ಶಿಕ್ಷಕರಾಗಿ ಉಡುಪಿ ಪತಂಜಲಿ ಸೇವಾ ಸಮಿತಿಯ ಯೋಗ ತರಬೇತುದಾರರಾದ ಹರೀಶ್ ನಾಯಕ್ ಹಾಗೂ ವೈಷ್ಣವಿ ಡಿ ನಾಯಕ್ ಅವರು ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗಾಸನದ ತರಬೇತಿ ಮತ್ತು ಯೋಗಾಸನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀದೇವಿ ಬಾಯಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.