ಉಡುಪಿ: ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಅಶ್ವಥ್ ನಾರಾಯಣ್‌ರವರು ಜೂ.29ರಂದು ಬುಧವಾರ ಕುಂದಾಪುರದ ಭಂಡಾರ್‌ಕರ್ಸ್ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಯೋಗ ಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ.

ರಾಜ್ಯದ ವಿವಿಧ 50ಕ್ಕೂ ಮಿಕ್ಕಿ ಅತ್ಯುತ್ತಮ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಈಗಾಗಲೇ ಸುಮಾರು 3000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ನೊಂದಣಿ ಮಾಡಿಕೊಂಡಿದ್ದು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.WhatsApp Image 2022-06-27 at 5.13.04 PM

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ವಹಿಸಿಕೊಳ್ಳಲಿದ್ದು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಇಂಧನ ಸಚಿವ ಶ್ರೀ ಸುನೀಲ್ ಕುಮಾರ್, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿಯವರ ಸಹಿತ ಜಿಲ್ಲೆಯ ಎಲ್ಲಾ ಶಾಸಕರು, ಜನ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

By suddi9

Leave a Reply

Your email address will not be published. Required fields are marked *