Published On: Tue, Jun 28th, 2022

ಉಡುಪಿ: ಪಡಲಿಖಾ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ವಿದ್ಯಾರ್ಥಿಗಳನ್ನು ದೇಶದ ಆಸ್ತಿಯಾಗಿಸಬೇಕು : ಮಾರುತಿ ಮಾಲ್ಗೆ

ಮುಂಬಯಿ : ಪಡಲಿಖಾ ಸಂಸ್ಥೆಯ ವತಿಯಿಂದ ಉಡುಪಿ ಜಿಲ್ಲೆಯ ಅನೇಕ ವಿದ್ಯಾರ್ಥಿಗಳಿಗೆ ತಲಾ ೨೦ ಸಾವಿರ ರೂಪಾಯಿನಂತೆ ಒಟ್ಟು ೩ ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಉಡುಪಿ ಇಲ್ಲಿನ ಮಣಿಪಾಲ್ ಇನ್ನ್ ಹೊಟೇಲ್  ಸಭಾಂಗಣದಲ್ಲಿ ನಡೆಯಿತು.DB7A3352

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಮಾಲ್ಗೆ ಮಾತನಾಡಿ, ಶಿಕ್ಷಣ ಎಂಬುದು ಇಂದು ಪ್ರತಿಯೊಬ್ಬರಿಗೂ ಅತೀ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಆರ್ಥಿಕ ನೆರವು ನೀಡುವುದು ಶ್ಲಾಘನೀಯವಾಗಿದೆ. ಮುಂದೆ ಈ ವಿದ್ಯಾರ್ಥಿಗಳು ದೇಶದ ಆಸ್ತಿಯಾಗುವ ನಿಟ್ಟಿನಲ್ಲಿ ಸಾಧನೆ ಮಾಡಬೇಕು ಎಂದು ಹಾರೈಸಿದರು.DB7A3300

ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಮುಖ್ಯ ಟ್ರಾಫಿಕ್ ವಾರ್ಡನ್ ಪ್ರೊ| ಎಂ.ಎಲ್ ಸುರೇಶನಾಥ್ ಮಾತನಾಡಿ, ಕೇವಲ ಶಿಕ್ಷಣದ ಪದವಿ ಪಡೆದರೆ ಸಾಲದು. ಅದರೊಂದಿಗೆ ಕೌಶಲ್ಯ ಮತ್ತು ಸಾಮರ್ಥ್ಯ ಕೂಡ ಮುಖ್ಯ. ಇವು ಇದ್ದರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ನಮ್ಮನ್ನು ಹುಡುಕಿಕೊಂಡು ಬರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.DB7A3341

ಪಡಲಿಖಾ ಸಂಸ್ಥೆಯ ನಿರ್ದೇಶಕ ಸುಹೇಲ್ ಹುಸೈನ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕುಮಾರ್ ವಿಟ್ಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.DB7A3342

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter