ರಸ್ತೆ ಬದಿಯ ಬೀದಿ ಬದಿಯ ಅಂಗಡಿಗಳ ತೆರವು : ಬೆಳ್ತಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ
ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್ ಪಾರ್ಟಿಯ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ನ್ಯಾಯವಾದಿಗಳಾದ ಬಿ. ಎಂ.ಭಟ್ ಮಾತನಾಡಿ ಕಾನೂನು ಹಾಗೂ ಸಂವಿಧಾನ ವಿರೋಧಿಸಿ ಸುಪ್ರೀಂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ pwd ಇಲಾಖೆ ಕೇವಲ ಗ್ರಾಮ ಪಂಚಾಯತ್ ನಿರ್ದೇಶನದಿಂದ ಬೀದಿ ಬದಿ ವ್ಯಾಪಾರಿಗಳ ಬದುಕನ್ನು ಕಸಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಂತರ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಶ್ರೇಯಾಭಿವೃದ್ದಿ ಸಂಘದ ಗೌರವಾಧ್ಯಕ್ಷ,ಇಮ್ತಿಯಾಜ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಈ ರೀತಿಯಾಗಿ ಮಾಡಿರುವುದು ಖಂಡನೀಯ,ಸುಗಮ ಸಂಚಾರಕ್ಕೆ ತೊಂದರೆಯಾದರೆ ಅವರಿಗೆ ನೋಟಿಸ್ ಕೊಟ್ಟು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. ಈ ವೇಳೆ ಸಿಪಿಐಎಂ ಮುಖಂಡರು ಪಾಲ್ಗೊಂಡಿದ್ದರು.