ಲಕ್ನೋ: ನಾಲ್ವರು ಕಾಮುಕರು ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆ ಗರ್ಭ ಧರಿಸಿದ ಘಟನೆ ನಡೆದಿದೆ. ಗರ್ಭಿಣಿಯಾಗಿರುವ ವಿಷಯ ತಿಳಿದ ಕಿಡಿಗೇಡಿಗಳು ಆಕೆಯ ಮೇಲೆ ಹಲ್ಲೆ ನಡೆಸಿ ಗರ್ಭಪಾತ ಆಗುವಂತೆ ಮಾಡಿದ್ದಾರೆ.

STOP RAPE

ಉತ್ತರಪ್ರದೇಶದ ದೇವಬಂದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಯುವತಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿತ್ತು. ಆಕೆ ಗರ್ಭಿಣಿಯಾಗಿದ್ದಾಳೆಂದು ತಿಳಿದ ಕೂಡಲೇ ಆಕೆಯನ್ನು ಕೊಲ್ಲಲು ಮುಂದಾಗಿದ್ದಾರೆ. ಜೂನ್ 25 ರಂದು ಆಕೆ ಅವರಿಂದ ತಪ್ಪಿಸಿಕೊಂಡು ಮನೆಗೆ ಮರಳಿದ್ದಳು. ಜೂನ್ 26 ರಂದು ನಾಲ್ವರೂ ಆಕೆಯ ಮನೆಗೆ ಬಂದು ಮತ್ತೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿ ಆಕೆಗೆ ಗರ್ಭಪಾತವಾಗಿದೆ ಎಂದು ಎಸ್ಪಿ ಸೂರಜ್ ರೈ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *