ಬೆಳ್ತಂಗಡಿ:ಗಂಡನನ್ನು ಕತ್ತಿಯಿಂದ ಕಡಿದು ಕೊಂದು ಹಾಕಿದ ಮಹಿಳೆ
ಬೆಳ್ತಂಗಡಿ: ಪತ್ನಿಯೋರ್ವಳು ಗಂಡನನ್ನು ಕತ್ತಿಯಿಂದ ಕಡಿದು ಕೊಂದು ಹಾಕಿದ ಘಟನೆಯೊಂದು ನಾವೂರು ಗ್ರಾಮದ ಅಬ್ಬನ ಕರೆ ಎಂಬಲ್ಲಿ ನಡೆದಿದೆ.
ಪೊಟ್ಟಸ್ ಬೇಬಿ (55) ಕೊಲೆಯಾದ ವ್ಯಕ್ತಿ. ಈತನ ಪತ್ನಿ ನಲ್ಲಮ್ಮ(50) ಎಂಬಾಕೆ ಕೊಲೆ ಮಾಡಿದ್ದಾರೆ. ಇಂದು ಬೆಳಗ್ಗೆ ಕೊಲೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.
ದಂಪತಿಗೆ ಒಬ್ಬ ಪುತ್ರಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಒಬ್ಬ ಮಗ ಉಪ್ಪಿನಂಗಡಿಯಲ್ಲಿ ಸ್ವಂತ ಉದ್ಯೋಗ ಮಾಡುತ್ತಿದ್ದು, ಇನ್ನೋರ್ವ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮಗಳನ್ನು ಮದುವೆ ಮಾಡಿಕೊಡಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.