ಬಂಟ್ವಾಳ: ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮೂವರು ಕ್ರಿಮಿನಲ್‍ಗಳ ವಿರುದ್ಧ ಪೊಲೀಸ್ ಇಲಾಖೆ ಗೂಂಡಾ ಕಾಯ್ದೆ ಜಾರಿಗೆ ವರದಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಗೂಂಡಾ ಕಾಯ್ದೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮೇರಮಮಲು ನಿವಾಸಿ ಇಮ್ರಾನ್ 23, ಹಫೀಸ್ 25, ಮಾದ ಹನೀಫ್ 28. ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗಿದೆ. ಇವರು ಈಗಾಗಲೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಮಾರಿಪಳ್ಳ ಶಾಲೆ ಬಳಿಯ ನಿವಾಸಿ ಎಂ.ಇಮ್ರಾನ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ 8, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಒಂದು ಪ್ರಕರಣ, ಮಾರಿಪಳ್ಳ ಪಾಡಿ ಮನೆ ನಿವಾಸಿ ಹಫೀಸ್ ಯಾನೆ ಅಪ್ಪಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 4 ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದರೆ, ಪೇರಿಮಾರು ಮಸೀದಿ ಬಳಿಯ ನಿವಾಸಿ ಹನೀಫ್ ಯಾನೆ ಮಾದ ಹನೀಫ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 8 ಹಾಗೂ ಬಜ್ಪೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *