ಕೊಲೊಂಬೊ: ಪಾಸ್‍ಪೋರ್ಟ್‍ಗಾಗಿ ಕಳೆದ 2 ದಿನಗಳಿಂದ ಸರತಿ ಸಾಲಿನಲ್ಲಿ ನಿಂತಿದ್ದ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಶ್ರೀಲಂಕಾದಲ್ಲಿ ನಡೆದಿದೆ.

ದ್ವೀಪರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಹಿನ್ನೆಲೆಯಲ್ಲಿ 26 ವರ್ಷದ ಮಹಿಳೆಯೊಬ್ಬರು ತಮ್ಮ ಪತಿಯೊಂದಿಗೆ ಶ್ರೀಲಂಕಾ ಬಿಟ್ಟು ವಿದೇಶದಲ್ಲಿ ಹೋಗಿ ಅಲ್ಲಿ ಉದ್ಯೋಗ ಪಡೆಯಬೇಕೆಂದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಾಸ್‍ಪೋರ್ಟ್ ಪಡೆಯಲು ಕಳೆದ 2 ದಿನಗಳಿಂದ ಸರತಿ ಸಾಲಿನಲ್ಲಿದ್ದರು. ಆದರೆ ಇವರಿಗೆ ಅಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿದೆ.

ಅಲ್ಲೇ ಇದ್ದ ಶ್ರೀಲಂಕಾ ಸೇನೆಯ ಸಿಬ್ಬಂದಿಯೊಬ್ಬರು ಇದನ್ನು ಗಮನಿಸಿ ಮಹಿಳೆಯನ್ನು ತಕ್ಷಣ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *