ಹಂಡೇಲು: ಕಸಾಯಿಖಾನೆ ಪೊಲೀಸರ ದಾಳಿ: 5 ದನಗಳ ರಕ್ಷಣೆ
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಪ್ರದೇಶಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ್ದಾರೆ.
ಹಂಡೇಲು ನಿವಾಸಿ ಹಸನ್‌ಬಾವ ಎಂಬಾತ ಕುಟುಂಬಸ್ಥರ ಜೊತೆ ಕಸಾಯಿಖಾನೆ ನಡೆಸುತ್ತಿದ್ದ ಎನ್ನುವ ಖಚಿತ ಮಾಹಿತಿ ಮೇರೆಗೆ ನಿರಂಜನ್ ಕುಮಾರ್, ಉಪನಿರೀಕ್ಷಕರರಾದ ಸುದೀಪ್, ಸಿದ್ದಪ್ಪ, ದಿವಾಕರ್ ರೈ ಸಹಿತ ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು, ಐದು ದನಗಳು, ದನದ ಚರ್ಮ, ಅವುಗಳ ವಧೆಗೆ ಬಳಸುತ್ತಿದ್ದ ಆಯುದಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಪರಾರಿಯಾಗಿದ್ದಾರೆ.
ನಿರ್ಜನ ಹಾಗೂ ಅಕ್ರಮವಾಗಿ ಕಸಾಯಿಖಾನೆ ಜಡೆಸಲು ಪೂರಕ ಪ್ರದೇಶವನ್ನು ಆರೋಪಿ ನಿರ್ಮಿಸಿದ್ದು, ಗುಡ್ಡದ ಬಳಿ ಇದ್ದ ತನ್ನ ಮನೆಯಿಂದಲೇ ನೀರು ಹಾಗೂ ವಿದ್ಯುತ್ ಸಂಪರ್ಕ ಮಾಡಿದ್ದ ಎನ್ನುವ ಅಂಶವು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಅರೋಪಿ ಹಸನ್ ಬಾವ ವಿರುದ್ಧ 2021ರಲ್ಲಿ ಅಕ್ರಮವಾಗಿ ದನದ ಮಾಂಸ ಇರಿಸಿದ ಪ್ರಕರಣ ದಾಖಲಾಗಿದೆ