ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ಅಪ್ರಾಪ್ತ ಮಕ್ಕಳ, ಯುವತಿ ಮೇಲೆ ನಿರಂತರ ಅತ್ಯಾಚಾರ ಘಟನೆಗಳು ನಡೆಯುತ್ತಿದ್ದು, ಇದನ್ನು ನಿರ್ವಹಿಸಲು ರಾಜ್ಯ ಸಕರ್ಾರ ಮತ್ತು ಗೃಹ ಸಚಿವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಒಂದು ಕೋಮಿನ ಒಲೈಕೆಗಾಗಿ, ಅಧಿಕಾರಿಗಳ ಮೇಲೆ ಒತ್ತಡ ತಂದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುತ್ತದೆ. ವಿರೋಧ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಗೂಂಡಾ ಕಾಯ್ದೆಯನ್ನು ಹೇರಲಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿಯಲ್ಲಿ 2ನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ ಅತ್ಯಾಚಾರ ಪ್ರಕರಣಗಳಲ್ಲಿ ಉತ್ತರ ಪ್ರದೇಶದ ನಂತರ 2ನೇ ಸ್ಥಾನದಲ್ಲಿದೆ.

rep
ತೀರ್ಥಹಳ್ಳಿಯಲ್ಲಿ ನಡೆದ ನಂದಿತಾ ಪೂಜಾರಿ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣವಲ್ಲದೆ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ 3 ಪ್ರಕರಣಗಳು ವಾರದ ಅವಧಿಯೊಳಗೆ ದಾಖಲಾಗಿದ್ದು, ಸುಳ್ಳು ಡೆತ್ ನೋಟ್ಗಳ ಮೂಲಕ ಪ್ರಕರಣಗಳನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆದಿವೆ.
ಕಾಂಗೇಸ್ ಮುಖಂಡರುಗಳ ತನ್ನ ತಾಯಿಯ ವಯಸ್ಸಿಗೆ ಸಮನಾರಾದವರ ಬಗ್ಗೆ ಕೀಳು ಭಾಷೆಯಲ್ಲಿ ಮಾತನಾಡುತ್ತಿದ್ದು, ಇದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ, ಇದು ಅತ್ಯಾಚಾರ ಪ್ರಕರಣಗಳಿಗೆ ಮತ್ತಷ್ಟು ಕುಮ್ಮಕ್ಕು ನೀಡಿದಂತಾಗಿರುತ್ತದೆ.
ಬಿಜೆಪಿ ದ.ಕ. ಜಿಲ್ಲಾ ಹಿಂದುಳಿದ ವರ್ಗಗಳ ಮೋಚರ್ಾವು ಇದನ್ನು ತೀವ್ರವಾಗಿ ಖಂಡಿಸಿ ಕೂಡಲೇ ಈ ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಬೇಕು ಮತ್ತು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತದೆ. ಎಂದು ಪ್ರಕಟಣೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷರಾದ ನ್ಯಾಯವಾದಿ ಮೋಹನ್ರಾಜ್ ಕೆ.ಆರ್. ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *