ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಆದಿನಾಥ ತೀರ್ಥಂಕರ ಮತ್ತು ಪದ್ಮಾವತಿ ಅಮ್ಮನವರ ಬಸದಿಯಲ್ಲಿ ನಿರ್ಮಾಣಗೊಂಡ ಪದ್ಮಾವತಿ ಸಭಾಂಗಣವನ್ನು ಜು.೧೪ರಂದು ಗುರುವಾರ ಬೆಳಿಗ್ಗೆ ೧೦.೩೫ ಗಂಟೆಗೆ ಧರ್ಮಸ್ಥಳ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು
ಕಾರ್ಕಳ ಜೈನಮಠ ಲಲಿತಕೀರ್ತಿ ಭಟ್ಟಾರಕ ಮಹಾಸ್ವಾಮಿ, ಮೂಡುಬಿದ್ರೆ ಜೈನ ಮಠ ಭಟ್ಟಾರಕ ಚಾರುಕೀರ್ತಿ ಮಹಾಸ್ವಾಮಿ, ಹೊಂಬುಜ ಜೈನಮಠ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿ ಆಶೀರ್ವಚನ ನೀಡುವರು. ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವರಾದ ಬಿ.ರಮಾನಾಥ ರೈ ಕೆ.ಅಭಯಚಂದ್ರ ಜೈನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
