Published On: Sun, Jul 17th, 2022

ರಾಷ್ಟ್ರಪತಿ ಚುನಾವಣೆಯಲ್ಲೂ ಆಪರೇಷನ್‌ ಕಮಲದ ಸದ್ದು

ನವದೆಹಲಿ: ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಚುನಾವಣೆಯಲ್ಲೂ ಆಪರೇಷನ್‌ ಕಮಲದ ಆರೋಪ ಕೇಳಿಬಂದಿದೆ.

ಬಿಜೆಪಿ ನೇತೃತ್ವದ ಎನ್‍ಡಿಎ ಬಳಿ ಶೇ.60ಕ್ಕೂ ಹೆಚ್ಚು ಅಂದರೆ 6.67 ಲಕ್ಷಕ್ಕೂ ಹೆಚ್ಚು ಮತಗಳು ಇವೆ. ಮೂರು ಲಕ್ಷ ಚಿಲ್ಲರೆ ಮತಗಳನ್ನು ವಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲದ ಕಾರಣ ಯಶವಂತ್ ಸಿನ್ಹಾ ಸೋಲು ಬಹುತೇಕ ಖಚಿತವಾಗಿದೆ. ಅವರ ಬಳಿ ಮೂರು ಲಕ್ಷ ಚಿಲ್ಲರೇ ಮತಗಳಷ್ಟೇ ಇವೆ.

ಪ್ರಮುಖವಾಗಿ ವಿಪಕ್ಷಗಳಲ್ಲಿನ ಬುಡಕಟ್ಟು ಸಮುದಾಯದ ಶಾಸಕರು, ಸಂಸದರಿಗೆ ಬಿಜೆಪಿ ಗಾಳ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ.  ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಯಶವಂತ್‌ ಸಿನ್ಹಾ ಬಿಜೆಪಿ ಹಣ ಆಮಿಷವನ್ನು ಒಡ್ಡಿದೆ ಎಂಬ ಆರೋಪ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮು ಗೆಲ್ಲುವುದು ಪಕ್ಕಾ ಆಗಿರುವುದರಿಂದ ಬಿಜೆಪಿಯವರು ಫುಲ್ ಜೋಷ್‍ನಲ್ಲಿ ಇದ್ದಾರೆ.

ಇದೇ ಜೋಷ್‍ನಲ್ಲಿ ಎನ್‍ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್‌ ಅವರನ್ನು ಕಣಕ್ಕಿಳಿಸಿದೆ. ವಿಪಕ್ಷಗಳು ಇಂದು ಅಭ್ಯರ್ಥಿಯನ್ನು ಪ್ರಕಟಿಸುವ ಸಂಭವ ಇದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter