ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದ ಮಾಜಿ ಸಚಿವ ರಮಾನಾಥ ರೈ
ಮುಂಬಯಿ: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರರ ಬೀಡಿನಲ್ಲಿ ಕರ್ನಾಟಕ ರಾಜ್ಯದ ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭಾನುಗ್ರಹ ಪಡೆದರು.
ಈ ಸಂದರ್ಭದಲ್ಲಿ ಕಾಂಗ್ರೇಸ್‌ನ ಧುರೀಣರಾದ ಪದ್ಮಶೇಖರ್ ಜೈನ್, ಬೇಬಿ ಕುಂದರ್, ಸುದರ್ಶನ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮೈಲಪ್ಪ ಸಾಲ್ಯಾನ್, ಸುದೀಪ್ ಕುಮಾರ್ ಶೆಟ್ಟಿ, ಶಿವಪ್ಪ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಡಾ| ಹೆಗ್ಗಡೆ ಅವರಿಗೆ ಅಭಿನಂದಿಸಿ ಶುಭಾರೈಸಿದರು.