ಸುದ್ದಿ9 ಮೂಡುಬಿದರೆ: ವಿದ್ಯಾಗಿರಿಯ ಡಾ.ಎ.ಎಸ್ ಆಚಾರ್ಯ ಸಭಾಂಗಣದಲ್ಲಿ ಎರಡು ದಿನಗಳ ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಮಂಗಳೂರು ಉತ್ತರ ಹಾಗೂ ಹಿರಿಯ ವಿಭಾಗದಲ್ಲಿ ಮೂಡುಬಿದರೆಗೆ ಅಗ್ರಸ್ಥಾನಿಯಾಗಿದೆ.
ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಿ ಪ್ರಶಸ್ತಿ ಫಲಕವನ್ನು ವಿತರಿಸಿದರು ನಂತರ ಮಾತನಾಡಿದ ಅವರು ದೊಡ್ಡವರ ಪ್ರತಿಭೆಗಳಿಂದ ಸಣ್ಣ ಮಕ್ಕಳಲ್ಲಿ ಹೆಚ್ಚಿನ ಪ್ರತಿಭೆಗಳಿವೆ. ಈ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದರೆ ಇನ್ನೂ ಹೆಚ್ಚಿನ ಸಾಧನೆಯನ್ನು ಮಕ್ಕಳು ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪುರಸಭಾಧ್ಯಕ್ಷೆ ಸುಪ್ರಿಯಾ.ಡಿ.ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾಥರ್ಿಯಲ್ಲೂ ವಿವಿಧ ರೀತಿಯ ಪ್ರತಿಭೆ ಇದೆ. ಆ ಪ್ರತಿಭೆಯನ್ನು ಅನಾವರಣಗೊಳಿಸಲು ಅವರಿಗೆ ಗುರುಗಳ ಪ್ರೋತ್ಸಾಹ ಮತ್ತು ವೇದಿಕೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯಂತಹ ಸ್ಪಧರ್ೆಗಳು ಅದಕ್ಕೆ ಸೂಕ್ತವಾದ ವೇದಿಕೆಯಾಗಿದೆ. ಸ್ಪಧರ್ಿಗಳು ಸೋಲು ಮತ್ತು ಗೆಲುವನ್ನು ಒಂದೇ ಸಮಾನವಾಗಿ ಸ್ವೀಕರಿಸಬೇಕು. ಗೆದ್ದ ಸ್ಪಧರ್ಿಗಳು ಇನ್ನೂ ಹೆಚ್ಚಿನ ಸ್ಪಧರ್ೆಗಳಲ್ಲಿ ಭಾಗವಹಿಸಬೇಕು ಸೋತ ಸ್ಪಧರ್ಿಗಳು ಸೋಲನ್ನೇ ಸವಾಲಾಗಿ ಸ್ವೀಕರಿಸುವ ಮೂಲಕ ಸಾಧನೆ ಮಾಡಬೇಕಾಗಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಅಭಿವೃದ್ಧಿ ವಿಭಾಗದ ಉಪನಿದರ್ೇಶಕ ಸಿಪ್ರಿಯನ್ ಮೊಂತೆರೊ ಸಮಾರೋಪ ಭಾಷಣ ಮಾಡಿದರು.
ಪುತ್ತಿಗೆ ಕ್ಷೇತ್ರದ ತಾ.ಪಂ. ಸದಸ್ಯ ಪ್ರಕಾಶ್, ಮೂಡುಬಿದರೆ ಕ್ಷೇತ್ರ ಶಿಕ್ಷಣಾಧಿಕಾರಿ ಗೋವಿಂದ ಮಡಿವಾಳ, ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್, ಮೂಡುಬಿದರೆ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶೀವಾನಂದ ಕಾಯ್ಕಿಣಿ ಉಪಸ್ಥಿರಿದ್ದರು.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಅಂಡಾರು ಗುಣಪಾಲ ಹೆಗ್ಡೆ ಸ್ವಾಗತಿಸಿದರು. ಶಿಕ್ಷಕ ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ನೋಡಲ್ ಅಧಿಕಾರಿ ರಾಧಾಕೃಷ್ಣ ಭಟ್ ವಂದಿಸಿದರು.4
ದ.ಕ ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಕಚೇರಿ, ಮೂಡುಬಿದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಪ್ರತಿಭಾ ಕಾರಂಜಿ ಹಮ್ಮಿಕೊಳ್ಳಲಾಯಿತು.
001

001p

By suddi9

Leave a Reply

Your email address will not be published. Required fields are marked *