ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ SC & ST ಸಭೆ
ಬಂಟ್ವಾಳ: ನಗರ ಪೊಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ SC & ST ಸಭೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಸೋನಾವಣೆ ಅವರ ಉಪಸ್ಥಿತಿಯಲ್ಲಿ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ನಡೆಸಲಾಗಿದೆ.

ಸಭೆಯಲ್ಲಿ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರತಾಪ್ ಸಿಂಗ್ ಥೋರಾಟ್, ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ವಿಟ್ಲ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಎಸ್.ಐ.ಮೂರ್ತಿ, ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.ಕಲೈಮಾರ್ ಸಭೆಯಲ್ಲಿ ಹಾಜರಿದ್ದು, SC & ST ರವರ ಕುಂದೂಕೊರತೆಗಳ ಬಗ್ಗೆ ಹಾಗೂ ಕಾನೂನು ಬಗ್ಗೆ ಮಾಹಿತಿ ನೀಡಿದರು.