ಎಳ್ಳಾರೆ:ಡಿಜಿಟಲ್ ಹೆಲ್ತ್ ಕಾರ್ಡ್ ರಚಿಸುವ ಕುರಿತು ಮಾಹಿತಿ ಕಾರ್ಯಕ್ರಮ
ಎಳ್ಳಾರೆ: ಅಂಗನವಾಡಿ ಕೇಂದ್ರದಲ್ಲಿ ಡಿಜಿಟಲ್ ಹೆಲ್ತ್ ಕಾರ್ಡ್ ರಚಿಸುವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಎಳ್ಳಾರೆ ಉಪ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಜಯಲಕ್ಷ್ಮೀ ಮಾತನಾಡಿ ವೈದ್ಯರ ಭೇಟಿ ವೇಳೆ ಡಿಜಿಟಲ್ ಹೆಲ್ತ್ ಕಾರ್ಡ್ ಅನ್ನು ತೋರಿಸಿದರೆ ರೋಗಿಯ ಎಲ್ಲಾ ಪೂರ್ವಾಪರ ತಿಳಿಯುತ್ತದೆ.
ವೈದ್ಯರು ನಿಯಮಿತ ಚಿಕಿತ್ಸೆಗೆ ಒಳಪಡುವ ವ್ಯಕ್ತಿಯ ಆರೋಗ್ಯದ ಕುರಿತ ದಾಖಲೆಗಳನ್ನು ಅಗತ್ಯ ಸಂದರ್ಭದಲ್ಲಿ ಬಳಸಲು ಸಹಕಾರಿ ಎಂದರು.
ಈ ಸಂದರ್ಭದಲ್ಲಿ ಕಡ್ತಲ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ರಮ್ಯಾ ರಘುರಾಮ್, ಗ್ರಾಮ ಪಂಚಾಯತ್ ಸದಸ್ಯರಾದ ದೇವೇಂದ್ರ ಕಾಮತ್ ಎಳ್ಳಾರೆ, ಆಶಾ ಕಾರ್ಯಕರ್ತೆ ಬೇಬಿ ಸೇರಿಗಾರ್ತಿ,ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ಉಪಸ್ಥಿತರಿದ್ದರು.