ಜು.27ರಂದು ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆ
ಬಂಟ್ವಾಳ: ತಾಲ್ಲೂಕಿನ ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜಿನಲ್ಲಿ ಜು.27ರಂದು ಬುಧವಾರ ನಡೆದ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ, ಪ್ರಾಂಶುಪಾಲೆ ಭಗಿನಿ ನವೀನ, ಭಗಿನಿ ವೀರ, ಸಂಘದ ಅಧ್ಯಕ್ಷ ಮೆಲ್ವಿನ್ ಲೋಬೋ, ಭಗಿನಿ ಫೆಲ್ಸಿಟಾ, ರೋಷನ್ ಪಿಂಟೋ, ವಿದ್ಯಾ, ಶರ್ಮಿಳ ರೋಜಾರಿಯೋ ಇದ್ದರು.