ಹೆಣ್ಣೂರುಪದವು: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮ
ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಹೆಣ್ಣೂರು ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ರಮ್ಯಾ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನೀಡಿದರು.

ಮಳೆಗಾಲದಲ್ಲಿ ನಾವು ನೆಡುವ ಗಿಡಗಳು ಪಕ್ಷಿಗಳ ಪಾಲಿಗೆ ವರವಾಗುವುದರ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಆರೋಗ್ಯಪೂರ್ಣ ಸಮಾಜವೂ ನಿರ್ಮಾಣವಾಗುತ್ತದೆ ಎಂದು ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಸಮೀಪದ ಹೆಣ್ಣೂರು ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯಾ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನೀಡಿದರು. ಮುಖ್ಯಶಿಕ್ಷಕಿ ವಿಜಯ ಭಂಡಾರಿ ಇದ್ದರು.