ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಪೇಟೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ವಾಹನ ಮತ್ತು ಜನ ಸಂಚಾರ ವಿರಳವಾಗಿತ್ತು. ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್(೩೨) ಹತ್ಯೆಗೆ ಸಂಬಂಧಿಸಿದಂತೆ ಇಲ್ಲಿನ ಹಿಂದೂ ಸಂಘಟನೆ ಮತ್ತು ಬಿಜೆಪಿ ಕರೆಯಂತೆ ಜು.27ರಂದು ಬುಧವಾರ ಇಲ್ಲಿನ ಬಿ.ಸಿ.ರೋಡು ಪೇಟೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟು ಸ್ವಯಂ ಬಂದ್ ಮಾಡಿದ್ದರು.

ಹತ್ಯೆ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಯುವ ಮುಖಂಡ ಕಿಶೋರ್ ಪಲ್ಲಿಪ್ಪಾಡಿ ಆಗ್ರಹಿಸಿದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಪ್ರಮುಖರಾದ ತಿರುಲೇಶ್ ಬೆಳ್ಳೂರು, ಪ್ರಶಾಂತ್ ಕೆಂಪುಗುಡ್ಡೆ, ಭುವಿತ್ ಶೆಟ್ಟಿ, ಅಶ್ವತ್ಥ್ ರಾವ್ ಬಾಳಿಕೆ, ನಿತೇಶ್, ಪ್ರಕಾಶ್ ಬೆಳ್ಳೂರು, ಲಕ್ಷಣರಾಜ್, ಸುರೇಶ್ ಕೋಟ್ಯಾನ್ ಮತ್ತಿತರರು ಇದ್ದರು. ಬಂಟ್ವಾಳ ನಗರ ಠಾಣೆ ಮತ್ತು ಪುಂಜಾಲಕಟ್ಟೆ ಠಾಣೆ ಎಸೈ ಸಹಿತ ಹೆಚ್ಚುವರಿ ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದರು.
